ಬಂಟ್ವಾಳ: ಮಂಡಾಡಿ ವ್ಯಾಪ್ತಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಪ್ರಕರಣವೊಂದನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಭೇದಿಸಿದ್ದಾರೆ. ದಂಧೆಯಲ್ಲಿ ನಿರತರಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಮೂಡುನಡುಗೋಡು ನಿವಾಸಿ ಸುರೇಶ್ ಕುಮಾರ್ (36) ಬಂಧಿತ ಆರೋಪಿಯಾಗಿದ್ದಾನೆ.
ಮನೆಯಲ್ಲೇ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಸಂಗ್ರಹಿಸಿದ್ದ 6 ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದ್ದು,. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.