ಪುತ್ತೂರು: ರಾಜಸ್ಥಾನದಲ್ಲಿ ಕನ್ನಯ್ಯ ಲಾಲ್ ಎಂಬ ಹಿಂದೂ ಯುವಕನನ್ನು ಹತ್ಯೆ ಮಾಡಿದ ಪ್ರಕರಣವನ್ನು ಖಂಡಿಸಿ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಬೇಕೆಂದು ಒತ್ತಾಯಿಸಿ, ಜು.1 ರಂದು ಸಂಜೆ 6.30ಕ್ಕೆ ಸವಣೂರು ಜಂಕ್ಷನ್ ಬಳಿ ಪ್ರತಿಭಟನೆ ನಡೆಯಲಿದೆ. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಹಿಂದೂ ಜಾಗರಣ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.