ಉಪ್ಪಿನಂಗಡಿ: ದ್ವಿಚಕ್ರ ವಾಹನಕ್ಕೆ ಅಡ್ಡ ಗಟ್ಟಿ ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಇಲಂತಿಲ ಎಂಬಲ್ಲಿ ನಡೆದಿದೆ.
ಹಲ್ಲೆಯಿಂದಾಗಿ ಉಪ್ಪಿನಂಗಡಿ ನಿವಾಸಿ ಮಂಜುನಾಥ್ ಎಂಬಾತ ಗಾಯಗೊಂಡಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಹಲ್ಲೆಗೈದ ತಂಡದ ಈರ್ವರು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ..