ಮಹಾರಾಷ್ಟ್ರದಲ್ಲಿ ನೂತನವಾಗಿ ಬಿಜೆಪಿ ಮತ್ತು ಶಿವಸೇನೆ ಸರಕಾರ ರಚನೆಯಾದ ಹಿನ್ನಲೆಯಲ್ಲಿ ಪುತ್ತೂರು ಬಿಜೆಪಿ ಕಚೇರಿಯ ಮುಂದೆ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಹರ್ಷಾಚರಣೆ ವ್ಯಕ್ತಪಡಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಚಂದ್ರಶೇಖರ್ ರಾವ್ ಬಪ್ಪಳಿಗೆ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ನಿತೀಶ್ ಶಾಂತಿವನ, ಪುರುಷೋತ್ತಮ ಮುಂಗ್ಲಿಮನೆ, ಜಯಶ್ರೀ.ಎಸ್. ಶೆಟ್ಟಿ, ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ತಾ.ಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಬಿಜತ್ರೆ, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಗೌರಿ, ನಗರಸಭೆ ಸದಸ್ಯರಾದ ಸುಂದರ ಪೂಜಾರಿ ಬಡಾವು, ದೀಕ್ಷಾ ಪೈ, ನವೀನ್ ಪೆರಿಯತ್ತೋಡಿ, ಗೌರಿ ಬನ್ನೂರು, ಜಿಲ್ಲಾ ಬಿಜೆಪಿ ಸದಸ್ಯ ರಾಮ್ದಾಸ್ ಹಾರಾಡಿ, ವಿಶ್ವನಾಥ ಕುಲಾಲ್, ಗೋಪಾಲಕೃಷ್ಣ ಪಟೀಲ್ ಚಾರ್ವಾಕ, ಎಪಿಎಂಸಿ ಮಾಜಿ ಸದಸ್ಯ ತೀರ್ಥಾನಂದ ದುಗ್ಗಳ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.