ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ಮೂರು ದಿನಗಳಿಂದ ತೀವ್ರ ಮಳೆಯಾಗುತ್ತಿದ್ದು, ಸದ್ಯ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿಯೂ ತೀವ್ರ ಮಳೆಯಾಗುವ ಸಂಭವವಿದ್ದು, ಈ ಹಿನ್ನೆಲೆ ಜು.4 ರಿಂದ 7 ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ಬಗ್ಗೆ ಜಿಲ್ಲಾಡಳಿತವು ಪ್ರಕಟಣೆಯಲ್ಲಿ ತಿಳಿಸಿದ್ದು, ಮುಂಜಾಗ್ರತಾ ಕ್ರಮಗಳನ್ನು ನಿರ್ವಹಿಸುವಂತೆ ತಿಳಿಸಿದೆ.
