ಪುತ್ತೂರು: ಕೇಂದ್ರ ಸರ್ಕಾರದ ಜಲ್ ಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಗಂಗೆ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಒಳಮೊಗ್ರು ಗ್ರಾಮಕ್ಕೆ 41 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಇದರ ಮೊದಲ ಹಂತದ ಕಾಮಗಾರಿಗಳಿಗೆ ಶಾಸಕರಾದ ಸಂಜೀವ ಮಠಂದೂರು ಇವರು ಶಿಲಾನ್ಯಾಸವನ್ನು ಮಾಡಿದರು.
ಕೈಕಾರ ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಕಾಮಗಾರಿಯ ಉದ್ಘಾಟನೆಯನ್ನು ಈ ಸಂದರ್ಭದಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸದಸ್ಯರುಗಳಾದ ಮೀನಾಕ್ಷೀ ಶಾಂತಿಗೋಡು, ಹರೀಶ್ ಬಿಜತ್ರೆ, ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರುಗಳು, ಭಾಜಪಾ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ನಿತೀಶ್ ಶಾಂತಿವನ ,ಭಾಜಪಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ರಾಜೇಶ್ ರೈ ಪರ್ಪುಂಜ, ಪಕ್ಷದ ಪ್ರಮುಖರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.