ಪುತ್ತೂರು: ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ(ಐಎಮ್ ಎ) ವೈದ್ಯರ ದಿನದ ಪ್ರಶಸ್ತಿ ಪುರಸ್ಕೃತರಾದ ಪುತ್ತೂರು ಆದರ್ಶ ಆಸ್ಪತ್ರೆಯ ಡಾ.ಎಂ.ಕೆ ಪ್ರಸಾದ್ ರವರಿಗೆ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಆಸ್ಪತ್ರೆ ವಠಾರದಲ್ಲಿ ಸನ್ಮಾನಿಸಲಾಯಿತು.

ಶಾಲು, ಹಾರ, ಬೆಳ್ಳಿಯ ಗಣಪತಿ ಪ್ರತಿಮೆ ನೀಡಿ ಡಾ.ಎಂ.ಕೆ. ಪ್ರಸಾದ್ ರವರನ್ನು ಗೌರವಿಸಲಾಯಿತು.
ಈ ವೇಳೆ ಸಮಿತಿ ಅಧ್ಯಕ್ಷ ಶಶಾಂಕ ಕೊಟೇಚಾ, ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಕೋಶಾಧಿಕಾರಿ ಶ್ರೀನಿವಾಸ, ಖಜಾಂಜಿ ನೀಲಂತ್, ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಮಚಂದ್ರ ಕಾಮತ್, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಗೌರಿ, ಜಯಶ್ರೀ ಎಸ್ ಶೆಟ್ಟಿ, ನಗರಸಭೆ ಮಾಜಿ ಸದಸ್ಯ ಸುಜೀಂದ್ರ ಪ್ರಭು, ಅಶೋಕ್ ಕುಂಬ್ಳೆ, ವಿಶ್ವನಾಥ ಗೌಡ ಬನ್ನೂರು, ಗೋಪಾಲ್ , ಭಾಮಿ ಜಗದೀಶ್ ಶೆಣೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.