ಬೆಳ್ತಂಗಡಿ: ತಾಲೂಕಿನಾದ್ಯಂತ ನಿನ್ನೆ ರಾತ್ರಿಯಿಂದ ಇಂದು ಮುಂಜಾನೆಯವರೆಗೆ ಭಾರೀ ಮಳೆ ಸುರಿದಿದ್ದು, ಮಳೆ ಮುಂದುವರಿದ ಹಿನ್ನಲೆಯಲ್ಲಿ ಇಲ್ಲಿನ ಪರಿಸ್ಥಿತಿ ಗಮನಿಸಿ ಕ್ಷೇತ್ರ ಶಿಕ್ಷಣಾಧಿಕಾರಿಯವರಿಂದ ಮಾಹಿತಿಯನ್ನು ಪಡೆದುಕೊಂಡು ಜಿಲ್ಲಾಧಿಕಾರಿಯವರು ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.4 ರಂದು ರಜೆ ಘೋಷಣೆ ಮಾಡಿದ್ದಾರೆ.
ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ಮಳೆಯಾದ ಹಿನ್ನಲೆಯಲ್ಲಿ ನದಿ ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಶಾಲೆಗಳಿಗೆ ಬರಲು ಸಮಸ್ಯೆಯಾಗುವ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.