ಕಡಬ: ಬೈಕ್- ಕಾರು ನಡುವೆ ಡಿಕ್ಕಿ ಸಂಭವಿಸಿ ಓರ್ವ ಗಾಯಗೊಂಡ ಘಟನೆ ಕಡಬದಲ್ಲಿ ನಡೆದಿದೆ.

ಉಪ್ಪಿನಂಗಡಿ ಕಡೆಯಿಂದ ಕಡಬಕ್ಕೆ ಬರುತ್ತಿದ್ದ ಆಲ್ಟೋ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಹೊಡೆದಿದೆ ಎನ್ನಲಾಗಿದೆ.
ಅಪಘಾತದಲ್ಲಿ ಬೈಕ್ ಸವಾರನಿಗೆ ಗಾಯವಾಗಿದ್ದು, ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

























