ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವವನ್ನು ಉತ್ತಮ ರೀತಿಯಲ್ಲಿ ನಡೆಸುವ ಉದ್ದೇಶದಿಂದ ಅಧಿಕಾರಿಗಳ ಸಭೆಯನ್ನು ಮಾನ್ಯ ಶಾಸಕರಾದ ಸಂಜೀವ ಮಠಂದೂರುರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಪುತ್ತೂರನ್ನು ಸಂಪರ್ಕಿಸುವ ರಸ್ತೆಗಳ ಸುವ್ಯವಸ್ಥೆ, ಅಲಂಕಾರದ ವ್ಯವಸ್ಥೆ, ಶುಚಿತ್ವ, ಜಾತ್ರೋತ್ಸವಕ್ಕೆ ಆಗಮಿಸುವ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ, ಕೋವಿಡ್ ಮುಂಜಾಗ್ರತಾ ವ್ಯವಸ್ಥೆಗಳ ಪಾಲನೆಯ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್ , ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೇಶವ ಪ್ರಸಾದ ಮುಳಿಯ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು.