ಪುತ್ತೂರು : ಭಾರತೀಯ ಸೇನೆಯ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿ ದೇಶದ ರಕ್ಷಣೆಗೆ ತೆರಳುತ್ತಿರುವ ಪುತ್ತೂರು ತಾಲೂಕಿನ ಬಲ್ನಾಡ್ ಗ್ರಾಮದ ರಮ್ಯಾ.ಡಿ ಅವರನ್ನು ಹಾಗೂ ಕಬಡ್ಡಿ ಕ್ರೀಡೆಯಲ್ಲಿ ಸಾಧನೆ ಗೈದು ಕರ್ನಾಟಕ ರಾಜ್ಯ ಜೂನಿಯರ್ ಕಬಡ್ಡಿ ತಂಡಕ್ಕೆ ಅಯ್ಕೆಯಾದ ಬಲ್ನಾಡ್ ಗ್ರಾಮದ ಕೆಲ್ಲಾಡಿಯ ವಿನುಶ್ರೀ ಅವರನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲಾ ಕಾರ್ಯಲಯದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಕರ್ನಾಟಕ ಪ್ರಾಂತ ಸಂಘಟನಾ ಕಾರ್ಯದರ್ಶಿ ಬಸವರಾಜು ಜೀ.ವಿಶ್ವ ಹಿಂದೂ ಪರಿಷತ್ ಪ್ರಾಂತ ಉಪಾಧ್ಯಕ್ಷರಾದ ಯು.ಪೂವಪ್ಪ,ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣಮೂರ್ತಿ.ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್.ಬಜರಂಗದಳ ಪ್ರಾಂತ ಸಹ ಸಂಚಾಲಕ ಮುರಳಿ ಕೃಷ್ಣ ಹಸಂತ್ತಡ್ಕ.
ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ ಕೃಷ್ಣ ಪ್ರಸನ್ನ. ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ.ಎಸ್ ,ಜಿಲ್ಲಾ ಉಪಾಧ್ಯಕ್ಷರಾದ ಪ್ರೇಮಲತಾ ರಾವ್ ಉಪಸ್ಥಿತರಿದ್ದರು.