ಪುತ್ತೂರು: ಕೊಳ್ತಿಗೆ ಗ್ರಾಮದ ಕುದ್ಕುಳಿ ಮಹಮ್ಮದ್ ಶಾಫಿ ಎಂಬವರ ತೋಟದಲ್ಲಿರುವ ಗೋದಾಮಿನಿಂದ 10 ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ 250 ಕೆ.ಜಿ. ಕಾಳು ಮೆಣಸನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಜಾಲ್ಸೂರು ಕಳಂಜಿ ನಿವಾಸಿ ಮಂಜು, ಸುಳ್ಯ ಕೊಡಿಯಬೈಲು ನಿವಾಸಿ ಪ್ರವೀಣ, ಜಾಲ್ಸೂರು ಬರ್ಪೆಡ್ಕ್ ನಿವಾಸಿ ಪವನ್ ಕುಮಾರ್, ಕೊಳ್ತಿಗೆ ನೀಟಡ್ಕ ನಿವಾಸಿ ಅಬ್ದುಲ್ ಬಾಶೀತ್ ಎಂದು ಗುರುತಿಸಲಾಗಿದೆ.

ಪ್ರಕರಣದ ತನಿಖೆ ನಡೆಸುತ್ತಿದ್ದ ಬೆಳ್ಳಾರೆ ಠಾಣಾ ಪೊಲೀಸು ಉಪನಿರೀಕ್ಷಕರು ಆರೋಪಿಗಳ ಬಗೆಗಿನ ಖಚಿತ ಮಾಹಿತಿ ಮೇರೆಗೆ ಅಡ್ಕಾರ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ ಕಾರನ್ನು ನಿಲ್ಲಿಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳನ್ನು ದಸ್ತಗಿರಿ ಮಾಡಿದ ನಂತರ ಆರೋಪಿ ಪವನ್ ಕುಮಾರನ ಮನೆಯಲ್ಲಿ ಕಳವು ಮಾಡಿ ಬಚ್ಚಿಟ್ಟಿದ್ದ 10 ಗೋಣಿ ಕಾಳು ಮೆಣಸನ್ನು ಸ್ವಾಧೀನ ಪಡಿಸಿಕೊಂಡಿದ್ದು, ಅದರ ಮೌಲ್ಯ ರೂ 118750/-. ಮತ್ತು ಕಾಳು ಮೆಣಸು ಸಾಗಾಟ ಮಾಡಲು ಉಪಯೋಗಿಸಿ ಕಾರು ಇದರ ಅಂದಾಜು ಮೌಲ್ಯ ರೂ 60,000/- ಆಗಿರುತ್ತದೆ. ಈ ಪ್ರಕಣದ ಕೃತ್ಯದಲ್ಲಿ ಇನ್ನೊಬ್ಬ ಅಪ್ರಾಪ್ತ ಬಾಲಕನು ಭಾಗಿಯಾಗಿದ್ದಾನೆ ಎಂಬ ಮಾಹಿತಿಯೂ ಲಭ್ಯವಾಗಿದೆ.
ಆರೋಪಿಗಳಾದ ಮಂಜು ಬಿ, ಪ್ರವೀಣ, ಪವನ್ ಕುಮಾರ್, ಅಬ್ದುಲ್ ಬಾಶೀತ್ ರವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಪೊಲೀಸ್ ಅಧೀಕ್ಷಕರಾದ ಸೋನಾವಣೆ ರಿಷಿಕೇಶ್, ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರಚಂದ್ರ ಹಾಗೂ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನಾ ಕುಮಾರಿ ಪಿ ರವರ ಆದೇಶದಂತೆ ನವೀನ್ಚಂದ್ರ ಜೋಗಿ ಪೊಲೀಸ್ ವೃತ್ತ ನಿರೀಕ್ಷಕರು ಸುಳ್ಯ ರವರ ಮಾರ್ಗದರ್ಶನದಲ್ಲಿ ರುಕ್ಮ ನಾಯ್ಕ್ ಹಾಗೂ ಸಿಬ್ಬಂದಿ ಗಳಾದ ಎಎಸ್‌ಐ ನಾರಾಯಣ, ಬಾಲಕೃಷ್ಣ, ನವೀನ್, ಸತೀಶ, ಪಿಸಿಗಳಾದ ಮಂಜುನಾಥ, ಚಂದ್ರಶೇಖರ, ಪ್ರವೀಣ ಕಮಾರ್, ಶ್ರೀಶೈಲ, ಮಂಜುನಾಥ ಹೆಚ್ ಜೆ ಹಾಗೂ ವಾಹದ ಚಾಲಕರಾದ ಪುರಂದರ ರವರು ಭಾಗವಹಿಸಿರುತ್ತಾರೆ ಹಾಗೂ ಜಿಲ್ಲಾ ಗಣಕಯಂತ್ರದ ದಿವಾಕರ ಹಾಗೂ ಸಂಪತ್ ರವರು ಭಾಗವಹಿಸಿದ್ದರು.

























