ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಧಾರಾಕಾರ ವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ನಾಳೆ ಜು.06 ರಂದು ರಜೆ ನೀಡಿ ಜಿಲ್ಲಾಧಿಕಾರಿ ರಾಜೇಂದ್ರ ಅವರು ಆದೇಶ ನೀಡಿದ್ದಾರೆ.
ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ
ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ
ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಎಲ್ಲಾ ಅಂಗನವಾಡಿ,
ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ
ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ
ಸಾರಲಾಗಿದೆ ಎಂದು ಜಿಲ್ಲಾಧಿಕಾರಿಯವರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿಯಾದ್ಯಂತ ವರುಣನ ಆರ್ಭಟ ಹೆಚ್ಚಾಗಿದ್ದು
ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.

























