ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕೈಕಂಬದ ತಲಪಾಡಿಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನನ್ನು ಸ್ನೇಹಿತರಿಬ್ಬರು ಸೇರಿಕೊಂಡು ಮಾರಕಾಸ್ತ್ರಗಳಿಂದ ಹತ್ಯೆ ನಡೆಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಮಾರಿಪಳ್ಳ ನಿವಾಸಿಗಳಾದ ಮಹಮ್ಮದ್ ನೌಫಾಲ್ ಹಾಗೂ ಮಹಮ್ಮದ್ ನೌಶೀರ್ ಬಂಧಿತ ಆರೋಪಿಗಳು.

ಇವರಿಬ್ಬರೂ ಕೊಲೆಯಾದ ಮಹಮ್ಮದ್ ಆಶಿಫ್ ಎಂಬಾತನ ಸ್ನೇಹಿತರಾಗಿದ್ದು, ಕ್ಷುಲ್ಲಕ ಕಾರಣಕ್ಕಾಗಿ ಜುಲೈ 4 ರಂದು ಮಧ್ಯರಾತ್ರಿ ತಲಪಾಡಿ ಹೋಟೆಲ್ ಒಂದರ ಸಮೀಪ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಚೂರಿಯಿಂದ ಇರಿದು ಕೊಲೆ ಮಾಡಿದ್ದರು.
ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಬಂಟ್ವಾಳ ನಗರ ಠಾಣಾ ಪೊಲೀಸ್ ಆರೋಪಿಗಳನ್ನು ಬಂಧಿಸಿದ್ದಾರೆ.

























