ಪುತ್ತೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡದ ವತಿಯಿಂದ ಬಕ್ರೀದ್ ಸಂದರ್ಭ ನಡೆಯುವ ಗೋಹತ್ಯೆ ಹಾಗೂ ಅಕ್ರಮ ಗೋ ಸಾಗಾಣಿಕೆಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಪುತ್ತೂರು ನಗರ ಠಾಣೆ ಉಪನಿರೀಕ್ಷಕ ರಾಜೇಶ್ ರವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ಬಜರಂಗದಳ ಪುತ್ತೂರು ಜಿಲ್ಲಾ ಸುರಕ್ಷಾ ಪ್ರಮುಖ್ ಜಯಂತ ಕುಂಜೂರುಪಂಜ, ಪ್ರಖಂಡ ಸಂಯೋಜಕ ಹರೀಶ್ ಕುಮಾರ್ ದೋಳ್ಪಾಡಿ, ಸಹ ಸಂಯೋಜಕ ಚೇತನ್ ಬೊಳುವಾರು, ಅಖಾಡ ಪ್ರಮುಖ್ ಹರ್ಷಿತ್ ಬಲ್ನಾಡು, ಗ್ರಾಮಾಂತರ ಪ್ರಖಂಡ ಅಖಾಡ ಪ್ರಮುಖ್ ದಿನೇಶ್ ತಿಂಗಳಾಡಿ ಉಪಸ್ಥಿತರಿದ್ದರು.

























