ಪುತ್ತೂರು: ಚಲಿಸುತ್ತಿದ್ದ ಬಸ್ಸಿನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡ ಘಟನೆ ಬೊಳುವಾರು ಇನ್ ಲ್ಯಾಂಡ್ ಮಯೂರದ ಸಮೀಪ ನಡೆದಿದೆ.

ಸೋಮವಾರ ಪೇಟೆಯಿಂದ ಪುತ್ತೂರಿಗೆ ಬಂದು ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡಿದ್ದು, ಬಸ್ ಚಾಲಕನು ತತ್ ಕ್ಷಣ ಬಸ್ ಅನ್ನು ನಿಲ್ಲಿಸಿ ಪರಿಶೀಲನೆ ನಡೆಸಿದ್ದು, ಈ ವೇಳೆ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಸರಿಯಾದ ಸಮಯಕ್ಕೆ ನಿಲ್ಲಿಸಿ ಪರಿಶೀಲನೆ ನಡೆಸಿದ ಹಿನ್ನೆಲೆ ನಡೆಯ ಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.


























