ಪುತ್ತೂರು: ಭಾರೀ ಗಾಳಿ ಮಳೆಗೆ ಬೃಹತ್ ಗಾತ್ರದ ತೆಂಗಿನಮರವೊಂದು ಮನೆಯ ಮೇಲೆ ಬಿದ್ದ ಘಟನೆ ಜು.9 ರಂದು ರಾತ್ರಿ ಸಾಲ್ಮರದಲ್ಲಿ ನಡೆದಿದೆ.

ಸಾಲ್ಮರ ನಿವಾಸಿ ಮೌರಿಸ್ ಲಸ್ರಾದೋ ಎಂಬವರ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದ್ದು, ಮನೆಯ ಹಂಚು ಸೇರಿದಂತೆ ಇತರ ಸಾಮಾಗ್ರಿಗಳು ಹಾನಿಗೊಳಗಾಗಿದ್ದು, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

ಘಟನಾ ಸ್ಥಳಕ್ಕೆ ನಗರಸಭಾ ಸದಸ್ಯ ಪ್ರೇಮ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





























