ಕಾಣಿಯೂರು: ಕಾರೊಂದು ಹೊಳೆಗೆ ಬಿದ್ದಿರುವ ಘಟನೆ ಜು.9 ರಂದು ರಾತ್ರಿ ಕಾಣಿಯೂರು ಬೈತಡ್ಕದಲ್ಲಿ ನಡೆದಿದ್ದು, ನೀರುಪಾಲಾಗಿರುವ ಕಾರಿಗಾಗಿ ಇದೀಗ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಹುಡುಕಾಟ ನಡೆಸುತ್ತಿದ್ದಾರೆ.

ಕಾರು ಹೊಳೆಗೆ ಬಿದ್ದ ದೃಶ್ಯ ಮಸೀದಿಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಹೊಳೆಯಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿರುವ ಹಿನ್ನೆಲೆ ಕಾರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಕಾರು ಸೇತುವೆಯ ತಡೆ ಬೆಲಿಗೆ ಡಿಕ್ಕಿ ಹೊಡೆದು ಹೊಳೆಗೆ ಬೀಳುವ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ
ಸೆರೆಯಾಗಿದೆ.



























