ಕಾಣಿಯೂರು: ಕಾರೊಂದು ಹೊಳೆಗೆ ಬಿದ್ದಿರುವ ಘಟನೆ ಜು.9 ರಂದು ರಾತ್ರಿ ಕಾಣಿಯೂರು ಬೈತಡ್ಕದಲ್ಲಿ ನಡೆದಿದ್ದು, ನೀರುಪಾಲಾಗಿರುವ ಕಾರು ಪತ್ತೆಯಾಗಿದ್ದು, ಆದರೇ ಮೇಲಕ್ಕೆತ್ತಲು ಪ್ರಯತ್ನಿಸಿದಾಗ ನೀರಿನ ರಭಸಕ್ಕೆ ಮುಂದೆ ಕೊಚ್ಚಿ ಹೋಗಿದೆ ಎಂದು ತಿಳಿದು ಬಂದಿದೆ.

ಇದೀಗ ಮತ್ತೆ ಕಾರನ್ನು ಹುಡುಕಾಡುತ್ತಿದ್ದಾರೆ ಎಂದು ವರದಿಯಾಗಿದೆ.
ಸ್ಥಳಕ್ಕೆ ಡಿವೈಎಸ್ಪಿ ಡಾ. ಗಾನ ಪಿ. ಕುಮಾರ್ ಭೇಟಿ ನೀಡಿದ್ದು, ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಜಮಾವಣೆಗೊಂಡಿದ್ದಾರೆ.
ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಕಾರು ಸೇತುವೆಯ ತಡೆ ಬೆಲಿಗೆ ಡಿಕ್ಕಿ ಹೊಡೆದು ಹೊಳೆಗೆ ಬೀಳುವ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ
ಸೆರೆಯಾಗಿದೆ.



























