ಕಾಣಿಯೂರು: ಕಾರೊಂದು ಹೊಳೆಗೆ ಬಿದ್ದಿರುವ ಘಟನೆ ಜು 9ರಂದು ರಾತ್ರಿ ಕಾಣಿಯೂರು ಬೈತಡ್ಕದಲ್ಲಿ ನಡೆದಿದ್ದು, ನೀರುಪಾಲಾಗಿರುವ ಕಾರು ಇದೀಗ ಪತ್ತೆಯಾಗಿದೆ.

ಕಾರು ಹೊಳೆಗೆ ಬಿದ್ದ ದೃಶ್ಯ ಮಸೀದಿಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹೊಳೆಯಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿರುವ ಹಿನ್ನೆಲೆ ಕಾರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಬಿದ್ದ ಜಾಗದಿಂದ 100 ಮೀ. ದೂರದಲ್ಲಿ ಕಾರು ಪತ್ತೆಯಾಗಿತ್ತು. ಆದರೇ ಅದನ್ನು ಮೇಲಕ್ಕೆತ್ತುವ ಪ್ರಯತ್ನ ಮಾಡಿದಾಗ ನೀರು ಹರಿಯುವ ರಭಸಕ್ಕೆ ಕಾರು ಮತ್ತೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಇದೀಗ ಮತ್ತೆ ಹರಸಾಹಸ ಪಟ್ಟು ಅಗ್ನಿಶಾಮಕ ದಳದ ಸಿಬ್ಬಂದಿ ಕಾರನ್ನು ಮೇಲಕ್ಕೆತ್ತಿದ್ದಾರೆ.

ಆದರೇ ಕಾರಿನಲ್ಲಿದ್ದವರ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿಲ್ಲ. ನೀರಿನ ರಭಸಕ್ಕೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಕಾರು ವಿಟ್ಲ ಕುಂಡಡ್ಕ ನಿವಾಸಿ ಧನುಷ್(26) ರವರದ್ದು ಎಂದು ತಿಳಿದು ಬಂದಿದ್ದು ಹಾಗೂ ಕಾರಿನಲ್ಲಿ ವಾಹನ ಚಲಾಯಿಸುತ್ತಿದ್ದ ಧನುಷ್ ರವರ ಸಂಬಂಧಿ ಮಂಜೇಶ್ವರ ಮೂಲದ ಧನುಷ್(21) ಕೂಡ ಇದ್ದರು ಎಂದು ತಿಳಿದು ಬಂದಿದೆ.
ಇವರಿಬ್ಬರು ನಿನ್ನೆ ರಾತ್ರಿ ಮನೆಯಿಂದ ಹೊರಟಿದ್ದಾರೆ ಎನ್ನಲಾಗಿದೆ. ಅವರು ಪತ್ತೆಯಾಗಬೇಕಿದೆ..






























