ಕಾಣಿಯೂರು: ಕಾರೊಂದು ಹೊಳೆಗೆ ಬಿದ್ದಿರುವ ಘಟನೆ ಜು 9ರಂದು ರಾತ್ರಿ ಕಾಣಿಯೂರು ಬೈತಡ್ಕದಲ್ಲಿ ನಡೆದಿದ್ದು, ನೀರುಪಾಲಾಗಿರುವ ಕಾರು ಪತ್ತೆಯಾಗಿದೆ. ಆದರೇ ಕಾರಿನಲ್ಲಿದ್ದ ಪ್ರಯಾಣಿಕರು ಇನ್ನೂ ಪತ್ತೆಯಾಗದ ಹಿನ್ನೆಲೆ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ.

ಕಾರು ಹೊಳೆಗೆ ಬಿದ್ದ ದೃಶ್ಯ ಮಸೀದಿಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹೊಳೆಯಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿರುವ ಹಿನ್ನೆಲೆ ಕಾರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಬಿದ್ದ ಜಾಗದಿಂದ 100 ಮೀ. ದೂರದಲ್ಲಿ ಕಾರು ಪತ್ತೆಯಾಗಿತ್ತು. ಆದರೇ ಅದನ್ನು ಮೇಲಕ್ಕೆತ್ತುವ ಪ್ರಯತ್ನ ಮಾಡಿದಾಗ ನೀರು ಹರಿಯುವ ರಭಸಕ್ಕೆ ಕಾರು ಮತ್ತೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಇದೀಗ ಮತ್ತೆ ಹರಸಾಹಸ ಪಟ್ಟು ಅಗ್ನಿಶಾಮಕ ದಳದ ಸಿಬ್ಬಂದಿ ಕಾರನ್ನು ಮೇಲಕ್ಕೆತ್ತಿದ್ದಾರೆ.
ಕಾರು ವಿಟ್ಲ ಕುಂಡಡ್ಕ ನಿವಾಸಿ ಧನುಷ್(26) ರವರದ್ದು ಎಂದು ತಿಳಿದು ಬಂದಿದ್ದು ಹಾಗೂ ಕಾರಿನಲ್ಲಿ ವಾಹನ ಚಲಾಯಿಸುತ್ತಿದ್ದ ಧನುಷ್ ರವರ ಸಂಬಂಧಿ ಮಂಜೇಶ್ವರ ಮೂಲದ ಧನುಷ್(21) ಕೂಡ ಇದ್ದರು ಎಂದು ತಿಳಿದು ಬಂದಿದೆ. ಇವರಿಬ್ಬರು ನಿನ್ನೆ ರಾತ್ರಿ ಮನೆಯಿಂದ ಹೊರಟಿದ್ದಾರೆ ಎನ್ನಲಾಗಿದೆ.

ಸ್ಥಳದಲ್ಲಿ ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಬೇರೆ ಬೇರೆ ಕಡೆಗಳಿಂದ ವಾಹನಗಳಲ್ಲಿ ಬಂದು ಶೋಧ ಕಾರ್ಯವನ್ನು ವೀಕ್ಷಿಸುತ್ತಿದ್ದಾರೆ. ಈ ಹಿನ್ನೆಲೆ ರಸ್ತೆಯ ಬದಿಯಲ್ಲೆಲ್ಲಾ ವಾಹನಗಳು ಸಾಲು ಗಟ್ಟಿ ನಿಂತಿವೆ..



























