ವಿಟ್ಲ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿ, ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ವೈದ್ಯನೊಬ್ಬನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಸರ್ಕಾರಿ ಆಸ್ಪತ್ರೆ ವೈದ್ಯ ಮಾಣಿ ಮೂಲದ ಅನುಷ್ ನಾಯ್ಕ್ ಬಂಧಿತ ಆರೋಪಿ.

ಅನುಷ್ ವಿವಾಹಿತನಾಗಿದ್ದು, ಈ ಹಿಂದೆಯೂ ಇಂತಹದ್ದೇ ಕೃತ್ಯ ವೆಸಗಿದ್ದ ಎಂಬ ಆರೋಪ ಕೇಳಿಬಂದಿದೆ.
ಅಪ್ರಾಪ್ತ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಈ ಬಗ್ಗೆ ಠಾಣೆಯಲ್ಲಿ ಅ. ಕ್ರ. 116/2020 ಕಲಂ: 8, 12 ಪೋಕ್ಸೋ ಆಕ್ಟ್ 506 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.


























