ನೆಲ್ಯಾಡಿ: ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ಜು.13 ರಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ.

ಘಟನೆಯಿಂದಾಗಿ ಲಾರಿ ಚಾಲಕ ಹಾಗೂ ಸಹಾಯಕ ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.



























