ವಿಟ್ಲ: ವಿಪರೀತ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಕಾಡುಮಠ ಬಸ್ತಿಮೂಲೆ ಎಂಬಲ್ಲಿ ಕಾಡುಮಠಕ್ಕೆ, ಕುಳಾಲು, ಕುದ್ರಿಯ, ಪಾದೆಕರಿಯ ಪ್ರದೇಶಗಳಿಂದ ಬರುವ ಕಾಲು ಸೇತುವೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದು, ಕೊಚ್ಚಿ ಹೋದ ಕಾಲು ಸಂಕವನ್ನು ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿಣಿ ರವರು ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರದ ಭರವಸೆ ನೀಡಿದರು.

ತಾತ್ಕಾಲಿಕ ಪರಿಹಾರಕ್ಕೆ ವ್ಯವಸ್ಥೆ ಮಾಡಿ ತಡೆಗೋಡೆ ಇತ್ಯಾದಿ ಹೆಚ್ಚುವರಿಕೆ ಸ್ಥಳಿಯರ ಬೇಡಿಕೆಗೆ ತಹಶೀಲ್ದಾರರಿಗೆ ಮುಖಾಂತರ ಜಿಲ್ಲಾ ಅಧಿಕಾರಿಗೆ, ಸಣ್ಣ ನೀರಾವರಿ ಅಧಿಕಾರಿಗಳಿಗೆ ಮತ್ತು ಸ್ಥಳಿಯ ಶಾಸಕರಿಗೆ ಬರೆಯುವುದಾಗಿ ತಿಳಿಸಿದರು.

ಈ ವೇಳೆ ಗ್ರಾಮ ಕರಣಿಕ ಮನೋಹರ್ ಹಾಗೂ ಸ್ಥಳೀಯ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.






























