ಮಂಗಳೂರು : ಕೊರೊನಾ ವೈರಸ್ ಸೋಂಕು 2ನೇ ಅಲೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ , ಸಾರ್ವಜನಿಕಆರೋಗ್ಯ ಕಾಪಾಡುವ ಉದ್ದೇಶದಿಂದ ಧಾರ್ಮಿಕಆಚರಣೆ, ಸಭೆ ಸಮಾರಂಭ ನಡೆಸದಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದರು.ಜಿಲ್ಲೆಯಾದ್ಯಂತ ಮಾರ್ಚ್ 29ರಿಂದಲೇ 144 (3) ಸೆಕ್ಷನ್ ಜಾರಿಯಲ್ಲಿದ್ದು ಮುಂದಿನ ಆದೇಶದವರೆಗೆ ಇದು ಮುಂದುವರಿಯಲಿದೆ. ಈ ಹಿನ್ನಲೆಯಲ್ಲಿ ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿ ಹಬ್ಬ, ಗುಡ್ ಪ್ರೈಡೇ ಇತ್ಯಾದಿ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿ ಪ್ರದೇಶದಲ್ಲಿ ಸಾರ್ವಜನಿಕ ಸಮಾರಂಭಗಳನ್ನು ಸಭೆಗಳನ್ನು ನಡೆಸುವಂತಿಲ್ಲ ಎಂದುಆದೇಶಿಸಿದ್ದರು.
ಆದರೆ, ಜನ ಈ ಆದೇಶ ಹೊರಬರುತ್ತಿದ್ದಂತೆ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಗೊಂದಲಕ್ಕೀಡಾಗಿದ್ದರು,ದಕ್ಷಿಣ ಕನ್ನಡ ಜಿಲ್ಲಾಡಳಿತದ ಆದೇಶಕ್ಕೆ ಈಗ ಉಸ್ತುವಾರಿ ಸಚಿವ ಕೋಟಾ ಸ್ಪಷ್ಟನೆ ನೀಡಿದ್ದಾರೆ. ಈಗಾಗಲೇ ನಿಗದಿಪಡಿಸಿದ ಯಕ್ಷಗಾನ, ಕೋಲ, ನೇಮ, ಪೂಜೆ – ಧಾರ್ಮಿಕ ಕಾರ್ಯಕ್ರಮ ನಡೆಸಲು ಯಾವುದೇ ತೊಂದರೆ ಇಲ್ಲ, ಆದರೆ ಕೋವಿಡ್ – 19 ನಿಯಮಾವಳಿಗಳನ್ನು ಪಾಲಿಸಿಕೊಂಡು ನಡೆಸಬೇಕು ಮತ್ತು ಜಿಲ್ಲಾಧಿಕಾರಿಯುವರಿಗೆ ಮರು ಆದೇಶ ಮಾಡಲು ಕೋಟಾ ಶ್ರೀನಿವಾಸ ಪೂಜಾರಿ ಅವರು ತಿಳಿಸಿರುವದಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.