ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಜು.14 ರಂದು ಗುರುಪೂರ್ಣಿಮೆಯನ್ನು ಆಚರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯರು ಪ್ರಾಸ್ತಾವಿಕ ಮಾತುಗಳೊಂದಿಗೆ ಸಂಸ್ಕೃತ ಶ್ಲೋಕಗಳೊಂದಿಗೆ ಗುರು ಪೂರ್ಣಿಮೆಯ ವಿಶೇಷತೆಯನ್ನು ತಿಳಿಸುತ್ತಾ ಎಲ್ಲರನ್ನೂ ಸ್ವಾಗತಿಸಿದರು. ಅಧ್ಯಕ್ಷರಾದ ಜಯರಾಮ ಕೆದಿಲಾಯ ಶಿಬರ ರವರು ಮಾತನಾಡಿ, ವೇದವ್ಯಾಸರ ಸಂದೇಶ ಹಾಗೂ ವೇದಗಳ ಮಹತ್ವ, ತಾಯಿಯೇ ಮೊದಲ ಗುರು ನಮ್ಮ ಪ್ರಯತ್ನದಿಂದ ಜ್ಞಾನವನ್ನು ಪಡೆಯಬೇಕು ಎಂದು ಮಕ್ಕಳಿಗೆ ಸ್ಪೂರ್ತಿಯ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಜಗದ್ಗುರುಗಳಾದ ವೇದವ್ಯಾಸ ಮಹರ್ಷಿಗಳ ಭಾವಚಿತ್ರಕ್ಕೆ ಎಲ್ಲರೂ ಪುಷ್ಪಾರ್ಚಗೈಯಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಜಯಮಾಲಾ, ಶಿಕ್ಷಕ ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸುಕನ್ಯ ಕಾರ್ಯಕ್ರಮ ನಿರೂಪಿಸಿದರು, ಸೌಮ್ಯ ಎಎಂ ರವರು ಧನ್ಯವಾದಗೈದರು.


























