ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಿ ಹಾಸನ ಎಸ್ ಪಿ ಹರಿರಾಂ ಶಂಕರ್ ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶದವರೆಗೂ ವಾಹನ ಸಂಚಾರಕ್ಕೆ ನಿಷೇಧವಿರಲಿದೆ.
ಹಾಸನದ ದೋಣಿಗಲ್ ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲ. ಇನ್ನು ಹೆಚ್ಚಿನ ಭೂಕುಸಿತವಾಗುವ ಸಾಧ್ಯತೆಯಿರುವುದರಿಂದ ವಾಹನ ಸಂಚಾರ ಬಂದ್ ಮಾಡಲಾಗಿದೆ.
ರಸ್ತೆ ಸಂಚಾರ ಬಂದ್ ಆಗಿರುವುದರಿಂದ ವಾಹನ ಸವಾರರು ಬದಲಿ ರಸ್ತೆ ಬಳಸುವಂತೆ ಸೂಚನೆ ನೀಡಲಾಗಿದೆ.
























