ಪುತ್ತೂರು: ಭಾರೀ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ಮನೆಗೆ ಬಿದ್ದ ಘಟನೆ ಮುಂಡೂರು ಗ್ರಾಮದ ನಡುಬೈಲಿನಲ್ಲಿ ನಡೆದಿದೆ.

ಮುಂಡೂರು ಗ್ರಾಮದ ನಡುಬೈಲಿನ ತಿಮ್ಮಪ್ಪ ಗೌಡರ ಮನೆಯ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿದ್ದು, ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿಗೊಂಡಿದೆ.

ಕ್ರೇನ್ ಮೂಲಕ ಮನೆಯ ಮೇಲೆ ಬಿದ್ದ ಮರವನ್ನು ತೆರವುಗೊಳಿಸಲಾಗಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎಂದು ವರದಿಯಾಗಿದೆ.

ಸ್ಥಳಕ್ಕೆ ಮುಂಡೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ಗ್ರಾಮಕರಣೀಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳೀಯ ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ, ಸುಂದರ ಗೌಡ ಹಾಗೂ ಮತ್ತಿತರರು ಮರ ತೆರವು ಕಾರ್ಯದಲ್ಲಿ ನಿರತರಾಗಿದ್ದಾರೆ.





























