ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ಮತ್ತು ವಿಡಿಯೋ ತೆಗೆಯುವಂತಿಲ್ಲ ಎಂಬ ಆದೇಶವನ್ನು ತಡರಾತ್ರಿ ಸರ್ಕಾರ ಹಿಂಪಡೆದಿದೆ.
ಸರ್ಕಾರಿ ಕಚೇರಿಗಳಲ್ಲಿ ಫೋಟೋ ಮತ್ತು ವಿಡಿಯೋ ತೆಗೆಯುವಂತಿಲ್ಲ ಎಂದು ಸರ್ಕಾರ ಶುಕ್ರವಾರ ಆದೇಶಿಸಿತ್ತು. ಇದರಿಂದಾಗಿ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು,ಹೀಗಾಗಿ ಶುಕ್ರವಾರ ತಡರಾತ್ರಿ ಸರ್ಕಾರ ಆದೇಶ ಹಿಂಪಡೆದಿದೆ.



























