ಬಂಟ್ವಾಳ: ಕ್ಷುಲ್ಲಕ ಕಾರಣಕ್ಕಾಗಿ ದ್ವಿಚಕ್ರ ವಾಹನ ಸವಾರನೋರ್ವ ಸರಕಾರಿ ವಾಹನವೊಂದರ ಗ್ಲಾಸ್ ಪುಡಿ ಮಾಡಿದ್ದಲ್ಲದೆ, ಕಾರಿನಲ್ಲಿದ್ದ ಸರಕಾರಿ ಅಧಿಕಾರಿಗಳಿಗೆ ಹಲ್ಲೆಗೆ ಮುಂದಾಗಿ ಅವಾಚ್ಯ ಶಬ್ದಗಳಿಂದ ಬೈದಿರುವ ಘಟನೆ ತುಂಬೆ ಎಂಬಲ್ಲಿ ನಡೆದಿದೆ.

ದ್ವಿಚಕ್ರ ವಾಹನದಲ್ಲಿ ವೇಗವಾಗಿ ಬರುತ್ತಿದ್ದ ಯುವಕ, ಕಾರಿನ ಹಿಂಬದಿಯಲ್ಲಿದ್ದು ಆತ ಕೂಡ ಬ್ರೇಕ್ ಹಾಕಿದಾಗ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ರಸ್ತೆ ಬಿದ್ದಿದ್ದಾನೆ ಎಂದು ಹೇಳಲಾಗಿದೆ.
ಈ ಹಿನ್ನೆಲೆ ಆತ ಕಾರಿಗೆ ದ್ವಿಚಕ್ರ ವಾಹನವನ್ನು ಅಡ್ಡ ಇಟ್ಟು, ತಡೆಯೊಡ್ಡಿ ಬಳಿಕ ಕಾರಿನ ಮಿರರ್ ಅನ್ನು ಪುಡಿಮಾಡಿ, ಚಾಲಕ ಸಹಿತ ಕಾರಿನಲ್ಲಿದ್ದ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದಿರುವ ಘಟನೆ ನಡೆದಿದೆ.



























