ಬೆಂಗಳೂರು : ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದ 6 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ, ಚಾಮರಾಜನಗರ, ದಕ್ಷಿಣ ಕನ್ನಡ, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಮಂಗಳವಾರ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಿದ್ದು, ಮಂಗಳೂರು, ಶಿರಸಿ, ಕುಂದಾಪುರ, ಕಾರ್ಕಳ, ಪಣಂಬೂರು, ಸಿದ್ದಾಪುರ, ಯಲ್ಲಾಪುರದಲ್ಲಿ ಮಳೆಯಾಗಿದ್ದು, ಇಂದು ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ಚಾಮರಾಜನಗರ, ಕೊಡಗು ಹಾಗೂ ಮೈಸೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.