ಚಾರ್ಮಾಡಿ: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಗೂಡ್ಸ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಲಾರಿಯೂ ರಸ್ತೆ ಬದಿಗೆ ಪಲ್ಟಿಯಾಗಿದ್ದು, ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ..



























