ಪುತ್ತೂರು: ಕಾಲೇಜಿನ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ
ವ್ಯಕ್ತಿಯೊರ್ವನನ್ನು ಗಾಂಜಾ ಸಹಿತ ಎಸ್. ಐ. ರಾಜೇಶ್ ರವರ ತಂಡ ವಶಕ್ಕೆ ಪಡೆದ ಘಟನೆ ಪುತ್ತೂರಿನ ಖಾಸಗಿ ಕಾಲೇಜಿನ ಬಳಿ ನಡೆದಿದೆ.
ಬಂಧಿತ ಆರೋಪಿಯನ್ನು ಕೇರಳ ಮೂಲದ ಕಾಟಕ್ಕಾಡು ನಿವಾಸಿ, ಪುತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ ಮೋಬಿನ್ ಜೋರ್ಜ್(20) ಎಂದು ಗುರುತಿಸಲಾಗಿದೆ.

ಖಾಸಗಿ ಕಾಲೇಜೊಂದರ ಬಳಿಯಿರುವ ಬಸ್ ನಿಲ್ದಾಣದ ಬಳಿ
ಸಾರ್ವಜನಿಕ ಸ್ಥಳದಲ್ಲಿ ಯಾರೋ ಒಬ್ಬ ವ್ಯಕ್ತಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿರುವುದಾಗಿ ಪೊಲೀಸರಿಗೆ
ಮಾಹಿತಿ ದೊರೆತಿದ್ದು, ಈ ಹಿನ್ನೆಲೆ ಸ್ಥಳಕ್ಕಾಗಮಿಸಿದ ಎಸ್.ಐ. ರಾಜೇಶ್ ಮತ್ತು ತಂಡ ಆರೋಪಿ ಮೋಬಿನ್ ಜೋರ್ಜ್ ನನ್ನು ಬಂಧಿಸಿ, ಆತನಿಂದ ಗಾಂಜಾ ಸಹಿತ
10,050 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ: 64/2022 ಕಲಂ: 8(ಸಿ),20 (b) (ii)B NDPS ಆಕ್ಟ್ ನಂತೆ ಪ್ರಕರಣ ದಾಖಲಾಗಿದೆ..
ಗಾಂಜಾ ಪೂರೈಸುವ ಮೂಲಕ ವಿದ್ಯಾರ್ಥಿಗಳನ್ನು ಮತ್ತು ಯುವಕರನ್ನು ಮಾದಕ ವಸ್ತುಗಳ ಸೆಳೆತಕ್ಕೆ ಸಿಲುಕಿಸಿ ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಲು ಯತ್ನಿಸುತ್ತಿದ್ದವನನ್ನು ಬಂಧಿಸಿದ ಎಸ್. ಐ. ರಾಜೇಶ್ ಮತ್ತು ತಂಡದ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ..

ಕಾರ್ಯಾಚರಣೆಯಲ್ಲಿ ಪುತ್ತೂರು ಉಪ ವಿಭಾಗದ ಪೊಲೀಸ್ ಅಧೀಕ್ಷಕರಾದ ಗಾನ ಕುಮಾರ್ ನಿರ್ದೇಶನದಂತೆ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಸುನಿಲ್ ಕುಮಾರ್ ಅವರ ಮಾರ್ಗದರ್ಶನದಂತೆ ರಾಜೇಶ್ ಕೆವಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸ್ಕರಿಯಾ ಉದಯಕುಮಾರ್ ಜಗದೀಶ್ ಬಸವರಾಜ್ ಕಿರಣ್ ಸಂತೋಷ್ ಕಾರ್ಯಾಚರಣೆಯಲ್ಲಿ ಸಹಕರಿಸಿರುತ್ತಾರೆ..



























