ಉಡುಪಿ: ರೋಗಿಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್‍ಗೇಟ್‍ಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

ಆಂಬ್ಯುಲೆನ್ಸ್ ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿತ್ತು. ಈ ವೇಳೆ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್‍ಗೆ ಡಿಕ್ಕಿಯಾಗಿದೆ.
ಆಂಬ್ಯುಲೆನ್ಸ್ ಡಿಕ್ಕಿ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ಭಯಾನಕ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ..

ಘಟನೆಯಲ್ಲಿ ಮೂವರು ಸಾವನ್ನಪ್ಪಿ, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ದಾಖಲಾಗಿದೆ..


























