ಸುಳ್ಯ: ಕ್ಷುಲ್ಲಕ ಕಾರಣಕ್ಕೆ ನಡೆದ ಹೊಡೆದಾಟದಲ್ಲಿ ಗಂಭೀರ ಗಾಯಗೊಂಡಿದ್ದ ಮಶೂದ್(19) ಜು.21 ರಂದು ನಿಧನರಾಗಿದ್ದು, ಅವರ ಮೃತದೇಹವನ್ನು ಮಂಗಳೂರು ಆಸ್ಪತ್ರೆಯಿಂದ ಬೆಳ್ಳಾರೆ ತರಲಾಗುತ್ತಿದೆ ಎಂದು ತಿಳಿದು ಬಂದಿದೆ.
ಆಸ್ಪತ್ರೆಯ ಬಳಿ ಹಾಗೂ ಯುವಕನ ಮನೆಯ ಹತ್ತಿರ ನೂರಾರು ಸಂಖ್ಯೆಯಲ್ಲಿ ಸಂಬಂಧಿಕರು ಹಾಗೂ ಮುಸ್ಲಿಂ ಯುವಕರು ಜಮಾಯಿಸಿದ್ದಾರೆ.

ಈ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯ ಬಳಿ, ಸವಣೂರು ಪೇಟೆಯಲ್ಲಿ ಹಾಗೂ ಬೆಳ್ಳಾರೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ವಹಿಸಿದ್ದಾರೆ.
ಸ್ಥಳಕ್ಕೆ ಡಿವೈಎಸ್ಪಿ ಡಾ. ಗಾನ ಪಿ. ಕುಮಾರ್ ರವರು ಭೇಟಿ ನೀಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸುವಂತೆ ಸೂಚಿಸಿದ್ದಾರೆ.

ಜು.19 ರಂದು ಕಾಸರಗೋಡು ತಾಲೂಕು ಮೊಗ್ರಾಲ್ ಪುತ್ತೂರು ವಾಸಿ ಮಸೂದ್ ಮೇಲೆ ಕ್ಷುಲ್ಲಕ ಕಾರಣಕ್ಕಾಗಿ ಎಂಟು ಮಂದಿಯ ತಂಡ ಹಲ್ಲೆ ನಡೆಸಿತ್ತು. ಈ ವೇಳೆ ಗಂಭೀರ ಗಾಯಗೊಂಡಿದ್ದ ಮಸೂದ್ ನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಇಂದು ಚಿಕಿತ್ಸೆ ಫಲಕಾರಿಯಾಗದೆ ಆತ ಕೊನೆಯುಸಿರೆಳೆದಿದ್ದಾನೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ಅಭಿಲಾಷ್, ಸುನಿಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್, ಭಾಸ್ಕರ ರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.


























