ಪುತ್ತೂರು: ವಕೀಲರ ಸಂಘ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಕಾನೂನು ಕಾರ್ಯಾಗಾರ ಕಾರ್ಯಕ್ರಮ ಪರಾಶರ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಿಶೇಷ ಸರಕಾರಿ ಅಭಿಯೋಜಕರಾದ ಪುಷ್ಪರಾಜ್ ಅಡ್ಯಂತಾಯ ರವರು, ಫೋಕ್ಸೋ ಕಾಯ್ದೆ, ಫೋಕ್ಸೋ ಪ್ರಕರಣಗಳ ಟ್ರಯಲ್ ಮತ್ತು ಜಾಮೀನು ವಿಚಾರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮಕ್ಕೆ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಓಂಕಾರಪ್ಪ ನವರು ಆಗಮಿಸಿ ಶುಭ ಕೋರಿದರು.
ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾದ ಮನೋಹರ ಕೆ ವಿ ರವರು ಪ್ರಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಚಿನ್ಮಯ್ ರೈ ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ವಕೀಲರ ಸಂಘದ ಕೋಶಾಧಿಕಾರಿ ಶ್ಯಾಮ್ ಪ್ರಸಾದ್ ಕೈಲಾರ್ ವಂದಿಸಿದರು.



























