ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವು ಪರಿಣಾಮಕಾರಿಯಾಗಿ ಅನುಷ್ಠಾನಗಿಳಿಸಿದ್ದು, ರಾಜ್ಯದಲ್ಲಿಯೇ ಕೋಟ್ಪಾ ಉನ್ನತ ಅನುಷ್ಠಾನ ಜಿಲ್ಲೆಯಾಗಿ ಗುರುತಿಸಲ್ಪಟ್ಟಿದೆ.ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ‘ಕೋಟ್ಪಾ ಕಾಯ್ದೆಯ ಉನ್ನತ ಅನುಷ್ಠಾನ ಜಿಲ್ಲೆ’ ಎಂದು ಘೋಷಿಸಲಾಗಿದೆ.