ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಖಾಸಗಿ ಸ್ಟಡಿ ಸೆಂಟರ್ ನಲ್ಲಿ ಭಿನ್ನಕೋಮಿನ ವಿದ್ಯಾರ್ಥಿಗಳ ತಂಡಗಳ ನಡುವೆ ಜಗಳ ನಡೆದು ಹೊಡೆದಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಂಡದೊಂದಿಗೆ ಬಂದು ಅವಾಚ್ಯವಾಗಿ ನಿಂದಿಸಿ ಪುತ್ತೂರು ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದು, ಇಮ್ರಾನ್ ಮತ್ತು ನಿಝಾಮ್ ಎಂಬುವವರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.