ಪುತ್ತೂರು: ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಜಾಲ್ಸೂರ್ ವಿನೋಬ ನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಜು.21 ರಂದು ಏರ್ಪಡಿಸಲಾದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ನೆಹರು ನಗರದ ವಿವೇಕಾನಂದ ಆಂಗ್ಲ ಮಾಧ್ಯಮ (ಸಿಬಿಎಸ್‌ಇ) ಶಾಲೆಯ 9ನೇ ತರಗತಿ ವಿದ್ಯಾರ್ಥಿ ಆಯುಷ್ ನರೇಂದ್ರ ರವರು 17ರ ವಯೋಮಿತಿ ಮತ್ತು 7ನೇ ತರಗತಿಯ ವಿದ್ಯಾರ್ಥಿನಿ ಕೃತಿ ರೈ ಯವರು 14ರ ವಯೋಮಿತಿಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.




























