ಪುತ್ತೂರು: ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಬಿದ್ದ ಘಟನೆ ಜು.24 ರಂದು ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರು ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದೆ.

ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಘಟನೆಯಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ..




























