ಪುತ್ತೂರು: ಹಿಂದೂ ಜಾಗರಣ ವೇದಿಕೆ ಪೆರ್ಲಂಪಾಡಿ ಘಟಕದ ನೇತೃತ್ವದಲ್ಲಿ, ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಕೊಳ್ತಿಗೆ ಇದರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ, ಮಧುಮೇಹ ತಪಾಸಣೆ ಮತ್ತು ರಕ್ತದೊತ್ತಡ ತಪಾಸಣೆ ಹಾಗೂ ಯೋಧರೋರ್ವರಿಗೆ ಸನ್ಮಾನ ಕಾರ್ಯಕ್ರಮ ಜು.24 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಹಲವಾರು ಮಂದಿ ಭಾಗವಹಿಸಿ ರಕ್ತದಾನ, ಮಧುಮೇಹ ತಪಾಸಣೆ,ರಕ್ತದೊತ್ತಡ ತಪಾಸಣೆಯ ಸದುಪಯೋಗ ಪಡೆದುಕೊಂಡರು. ಹಿಂದೂ ಜಾಗರಣ ವೇದಿಕೆ ಮುಖಂಡರು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.






























