ಮಂಗಳೂರು: ನಗರದ ಪಬ್ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಬಲ್ಮಠ ಬಳಿಯ ಪಬ್ ನ ಒಳಗೆ ಅಪ್ರಾಪ್ತರಿಗೂ ಪ್ರವೇಶ ನೀಡಲಾಗಿತ್ತು. ಇದಲ್ಲದೆ ಮದ್ಯ ನೀಡಿದ ವಿಚಾರವಾಗಿ ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಮಂಗಳೂರು ಬಂದರು ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ಪಬ್ ನಲ್ಲಿ ಪಾರ್ಟಿ ನಡೆಯುತ್ತಿದ್ದು, ಕಾಲೇಜು ಫೇರ್ ವೆಲ್ ನೆಪದಲ್ಲಿ ಪಬ್ ನಲ್ಲಿ ಕುಡಿದು ಯುವಕ-ಯುವತಿಯರು ಮೋಜು ಮಸ್ತಿಯಲ್ಲಿ ತೊಡಗಿದ್ದ ವಿಚಾರವಾಗಿ ಬಜರಂಗದಳ ಕಾರ್ಯಕರ್ತರು ನಿನ್ನೆ ರಾತ್ರಿ ಪಬ್ ಮುಂದೆ ಜಮಾವಣೆಗೊಂಡಿದ್ದರು.