ಬೆಂಗಳೂರು: ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ನನ್ನು ನಿನ್ನೆ (ಜುಲೈ 26) ಆತನ ಕೋಳಿ ಅಂಗಡಿಗೆ ನುಗ್ಗಿ ಹಂತಕರು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಕುರಿತಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಹೇಯಕೃತ್ಯ ಎಸಗಿದವರನ್ನ ಬಂಧಿಸಿ ಕಾನೂನಿನಡಿ ಹಂತಕರಿಗೆ ಶಿಕ್ಷೆ ಕೊಡಿಸುವುದಾಗಿ ಟ್ವಿಟರ್ ಮೂಲಕ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಕರುಣಿಸಲೆಂದು ಪ್ರಾರ್ಥಿಸುವೆ. ಪ್ರವೀಣ್ ನೆಟ್ಟಾರು ಆತ್ಮಕ್ಕೆ ಶಾಂತಿ ಸಿಗಲೆಂದು ಟ್ವೀಟ್ ಮೂಲಕ ತಿಳಿಸಿದರು.
ಇನ್ನೂ ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಪ್ರವೀಣ್ ನೆಟ್ಟಾರು ಮೃತದೇಹವನ್ನು ಇಂದು ಬೆಳಿಗ್ಗೆ 9 ಗಂಟೆಗೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು. ಪುತ್ತೂರಿನಿಂದ ಬೆಳ್ಳಾರೆಗೆ ಪ್ರವೀಣ್ ಮೃತದೇಹವನ್ನು ಮೆರವಣಿಗೆ ಮೂಲಕ ತೆರಳಲು ನಿರ್ಧಾರ ಮಾಡಲಾಗಿದ್ದು, ಹುಟ್ಟೂರು ನೆಟ್ಟಾರಿನಲ್ಲಿ ಅಂತ್ಯ ಸಂಸ್ಕಾರ ನಡೆಸಲು ತೀರ್ಮಾನ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು.
— Basavaraj S Bommai (@BSBommai) July 26, 2022
ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ pic.twitter.com/kCk3W6hVc5


























