ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಮೂವರ ತಂಡ ಈ ಕೃತ್ಯ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಈ ಹಿನ್ನಲೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ತನಿಖೆಗೆ ನಾಲ್ಕು ವಿಶೇಷ ಪೋಲೀಸ್ ತಂಡವನ್ನು ರಚಿಸಲಾಗಿದ್ದು, ಎಲ್ಲಾ ಆಯಾಮಗಳಲ್ಲೂ ತನಿಖೆ ಕೈಗೆತ್ತಿಕೊಳ್ಳಲಾಗಿದೆ, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ವಿಚಾರಣೆ ಕೂಡಾ ಮಾಡಲಾಗುತ್ತಿದೆ .ಶೀಘ್ರವೇ ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತದೆ ಎಂದು ಎಸ್ಪಿ ಋಷಿಕೇಶ ಸೋನಾವಣೆ ಮಾಹಿತಿ ನೀಡಿದ್ದಾರೆ.


























