ಸುಳ್ಯ: ಬಿಜೆಪಿ ಕಾರ್ಯಕರ್ತ ಪ್ರವೀಣ್ ರವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಸಂಭವಿಸಿದ ಲಾಠಿ ಚಾರ್ಜ್ ನಲ್ಲಿ ಗಾಯಗೊಂಡ ಹಿಂದೂ ಕಾರ್ಯಕರ್ತರು ಸುಳ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅಲ್ಲಿಗೆ ಭೇಟಿ ನೀಡಿದ ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ರವರು ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು.

ಪ್ರವೀಣ್ ಹತ್ಯೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ಆಗಮಿಸಿದ ಜಗದೀಶ್ ಕಾರಂತ್ ರವರು ಲಾಠಿ ಚಾರ್ಜ್ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಆರೋಗ್ಯದ ಕುರಿತಾಗಿ ಮಾಹಿತಿ ಪಡೆದುಕೊಂಡರು.



























