ಪುತ್ತೂರು: ಪ್ರವೀಣ್ ಹತ್ಯೆ ಹಿನ್ನೆಲೆ ಬಿಜೆಪಿ ವಿರುದ್ಧ ಆಕ್ರೋಶಿತರಾದ ಪಕ್ಷದ ಜವಾಬ್ದಾರಿ ಹೊಂದಿರುವ ಹಲವು ಪ್ರಮುಖರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ.
ಪಕ್ಷದ ಕಾರ್ಯಕರ್ತನ ಹತ್ಯೆಯಾದರೂ ಬಿಜೆಪಿ ಯಾವುದೇ ಸೂಕ್ತ ಕ್ರಮಕೈಗೊಂಡಿಲ್ಲ ಎಂದು ಪಕ್ಷದ ವಿರುದ್ಧ ಆಕ್ರೋಶಿತರಾದ ಕಾರ್ಯಕರ್ತರು, ಪಕ್ಷದ ಜವಾಬ್ದಾರಿ ಹೊಂದಿರುವ ಹಲವು ಪ್ರಮುಖರು ಪಕ್ಷದಲ್ಲಿನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ.
ಪುತ್ತೂರು,ಸುಳ್ಯ, ವಿಟ್ಲ, ಬಂಟ್ವಾಳ,ಉಪ್ಪಿನಂಗಡಿ, ಶಿವಮೊಗ್ಗ, ಚಿಕ್ಕಮಗಳೂರು, ಬಾಗಲಕೋಟೆ ಸೇರಿದಂತೆ ರಾಜ್ಯದ 700ಕ್ಕೂ ಹೆಚ್ಚು ಪಕ್ಷದ ಜವಾಬ್ದಾರಿ ಹೊಂದಿರುವ ಪ್ರಮುಖರು ಬಿಜೆಪಿ ಪಕ್ಷದಲ್ಲಿರುವ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಹಿಂದೂ ಕಾರ್ಯಕರ್ತರ ಹತ್ಯೆಗೆ ನ್ಯಾಯ ದೊರಕಿಸಿಕೊಡುವರೆಗೆ ನಾವೂ ಬಿಜೆಪಿ ಪಕ್ಷದ ಯಾವುದೇ ಕಾರ್ಯಗಳಲ್ಲಿ ಭಾಗವಹಿಸುವುದಿಲ್ಲ., ಹಿಂದುತ್ವದ ಆಧಾರದ ಮೇಲೆ ಅಧಿಕಾರಕ್ಕೆ ಬಂದ ಬಿಜೆಪಿ ಯಾವತ್ತೂ ಕಾರ್ಯಕರ್ತರ ಸಾವಿಗೆ ನ್ಯಾಯ ಒದಗಿಸುತ್ತಾರೋ., ಭಾರತಕ್ಕೆ ಮಾರಕ ಆಗಿರೋ ಜಿಹಾದಿ ಭಯೋತ್ಪಾದಕರಿಗೆ ಸರಿಯಾದ ಶಿಕ್ಷೆ ನೀಡುತ್ತೋ ಅವಾಗ ಮತ್ತೆ ಬಿಜೆಪಿ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯೋಕೆ ಸಿದ್ಧರಿದ್ದೇವೆ ಎಂದು ಹೇಳುತ್ತಾ ಎಲ್ಲರೂ ಸಾಮೂಹಿಕವಾಗಿ ರಾಜೀನಾಮೆ ಬಗ್ಗೆ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.
700ಕ್ಕೂ ಅಧಿಕ ಮಂದಿ ರಾಜೀನಾಮೆ ಘೋಷಣೆ..!?? ಮುಂದೇನು:
ಹಿಂದೂ ಕಾರ್ಯಕರ್ತರ ಹತ್ಯೆಯಿಂದಾಗಿ ನೊಂದ ಬಿಜೆಪಿ ಕಾರ್ಯಕರ್ತರ ರಾಜೀನಾಮೆ ಪರ್ವ ಆರಂಭವಾಗಿದ್ದು, ರಾಜ್ಯಾದ್ಯಂತ ಬಿಜೆಪಿ ಪಕ್ಷದ 700ಕ್ಕೂ ಅಧಿಕ ಮಂದಿ ಕಾರ್ಯಕರ್ತರು ರಾಜೀನಾಮೆ ಘೋಷಣೆ ಮಾಡುತ್ತಿದ್ದು, ಮುಂದೆ ಬಿಜೆಪಿ ಯಾವ ರೀತಿಯ ನಿಲುವನ್ನು ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ..


























