ಪುತ್ತೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ರವರ ಹತ್ಯೆಗೆ ಸಂಬಂಧಿಸಿದಂತೆ ಯತೀಶ್ ಹೆಸರಿನ ಯಾರನ್ನೂ ಪೊಲೀಸರು ಬಂಧಿಸಿಲ್ಲ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ರವರು ಸ್ಪಷ್ಟನೆ ನೀಡಿದ್ದಾರೆ.
ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಸುಮಾರು 12 ಮಂದಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಹೊರತು ಯಾರನ್ನೂ ಬಂಧಿಸಿಲ್ಲ ಎಂದು ಎಸ್ಪಿ ಸ್ಪಷ್ಟನೆ ನೀಡಿದ್ದಾರೆ.


























