ತಿರುಪತಿ: ಮತ್ತೆ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ತಿರುಪತಿ ತಿರುಮಲದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಸರ್ವದರ್ಶನ ಟೋಕನ್ ವಿತರಣೆಯನ್ನು 22 ಸಾವಿರದಿಂದ 15 ಸಾವಿರಕ್ಕೆ ಇಳಿಕೆ ಮಾಡಲಾಗುವುದು. ಇದರೊಂದಿಗೆ ಆನ್ಲೈನ್ ವಿಶೇಷ ದರ್ಶನ ಟಿಕೆಟ್ ಗಳನ್ನು ಕಡಿತ ಮಾಡಲಾಗುವುದು. ತಿರುಮಲ ತಿರುಪತಿಗೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸುವ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಇದರೊಂದಿಗೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸೋಂಕಿನ ಲಕ್ಷಣ ಇರುವ ಭಕ್ತರು ತಿರುಮಲಕ್ಕೆ ಭೇಟಿ ನೀಡದಂತೆ ನಿರ್ಬಂಧವಿದೆ ಎಂದು ಟಿಟಿಡಿ ಅಧಿಕಾರಿಗಳು ಹೇಳಿದ್ದಾರೆ.