ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ರವರ ಮನೆಗೆ ಇಂದು(ಜು.28) ಸಂಜೆ 6.30 ರ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ.
3.30 ರ ವೇಳೆಗೆ ಬೆಂಗಳೂರಿನಿಂದ ಹೊರಟು, 4.20 ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿಎಂ ಬಂದಿಳಿಯಲಿದ್ದಾರೆ. ಆ ಬಳಿಕ ರಸ್ತೆ ಮಾರ್ಗವಾಗಿ ಸುಳ್ಯ ತಾಲೂಕಿನಲ್ಲಿರುವ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಲಿದ್ದಾರೆ. ಆ ಬಳಿಕ 9.15 ಕ್ಕೆ ಮತ್ತೆ ವಿಮಾನದ ಮೂಲಕ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

























