ಪುತ್ತೂರು: ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ರವರಿಗೆ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ವತಿಯಿಂದ ಬಿಜೆಪಿ ಕಚೇರಿಯಲ್ಲಿ ಜು.28 ರಂದು ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.

ಶಾಸಕ ಸಂಜೀವ ಮಠಂದೂರು ರವರು ನುಡಿನಮನ ಸಲ್ಲಿಸಿದರು.

ಪಕ್ಷ ಕಾರ್ಯಕರ್ತರ ಜೊತೆ ಸದಾ ಇರುತ್ತದೆ. ಪ್ರವೀಣ್ ಒಬ್ಬ ಕಳಂಕ ರಹಿತ ಯುವ ಕಾರ್ಯಕರ್ತ, ನಮ್ಮ ಮನೆ ಮಗನಂತೆ, ಅವರನ್ನು ಹತ್ಯೆ ಮಾಡಿದ ಕಿಡಿಗೇಡಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನು ಪ್ರಕಾರ ತಕ್ಕ ಶಿಕ್ಷೆ ನೀಡುವುದಕ್ಕೆ ಬದ್ಧವಾಗಿದೆ. ಮುಂದೆಯೂ ಅವರ ಕುಟುಂಬದವರ ಕಷ್ಟನಷ್ಟಗಳಲ್ಲಿ ಪಕ್ಷವು ಜೊತೆಗಿರುತ್ತದೆ ಎಂದು ಮಠಂದೂರು ಹೇಳಿದರು.
ಈ ವೇಳೆ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ನಿಕಟಪೂರ್ವ ಗ್ರಾಮಾಂತರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಶಾಂತಿವನ, ಜಯಶ್ರೀ ಎಸ್ ಶೆಟ್ಟಿ, ಮಂಡಲ ಪದಾಧಿಕಾರಿಗಳು, ಜಿಲ್ಲಾ ಸಮಿತಿ ಸದಸ್ಯ ಚಂದ್ರಶೇಖರ ರಾವ್ ಬಪ್ಪಳಿಗೆ, ರಾಮದಾಸ್ ಹಾರಾಡಿ, ನಗರಸಭಾ ಸದಸ್ಯರು ಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು- ಸದಸ್ಯರು, ಮೋರ್ಚಾ ಪ್ರಕೋಷ್ಠಗಳ ಪ್ರತಿನಿಧಿಗಳು, ಹಿರಿಯ ಕಿರಿಯ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.



























